Home » ಜಿಲ್ಲೆ » Bidar » ಚಿಟಗುಪ್ಪ; ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ!

ಚಿಟಗುಪ್ಪ; ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ!

ಚಿಟಗುಪ್ಪ; ಬರಪೀಡಿತ ಪ್ರದೇಶ ಘೋಷಣೆಗೆ ಆಗ್ರಹ.

ಚಿಟಗುಪ್ಪ:- ರಾಜ್ಯದಲ್ಲಿ ಕೈ ಕೊಟ್ಟಿರುವ ಮಳೆಗಾಲದ ಪ್ರಯುಕ್ತ ಮಳೆ ಇಲ್ಲದೆ ಬೆಳೆಗಳು ಒಣಗುತ್ತಿದ್ದು, ಕೂಡಲೇ ಕರ್ನಾಟಕ ರಾಜ್ಯವನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ಒತ್ತಾಯಿಸಿ ಬೀದರ್ ಜಿಲ್ಲೆಯ ಚಿಟಗುಪ್ಪದಲ್ಲಿ ಕನ್ನಡ ಸೇನೆ ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆಯನ್ನು ನಡೆಸಲಾಯಿತು. ಪ್ರತಿಭಟನೆಯಲ್ಲಿ ಹೋರಾಟಗಾರರು ಹಾಗೂ ರೈತರು ಮಾತನಾಡಿ,

ಕರ್ನಾಟಕ ರಾಜ್ಯವನ್ನು ಬರಗಾಲ ಪೀಡಿತ ರಾಜ್ಯವೆಂದು ಘೋಷಿಸಬೇಕು.

ರಾಜ್ಯದ ಎಲ್ಲಾ ರೈತರ ಬ್ಯಾಂಕ್ ನಲ್ಲಿರುವ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು.

ಮಳೆ ಕೊರತೆಯಿಂದಾಗಿ ಬೆಳೆ ಹಾನಿಗೋಳಗಾದ ಪ್ರತಿ ಎಕರೆಗೆ 50 ಸಾವಿರ ಪರಿಹಾರವನ್ನು ತಕ್ಷಣವೇ ಘೋಷಿಸಿ,ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟಿಸಲಾಯಿತು. ಈ ಸಂದರ್ಭದಲ್ಲಿ ಸಂಘಟನೆಯ ತಾಲ್ಲೂಕಾಧ್ಯಕ್ಷ ಪವನ ಪೂಜಾರಿ, ಖುರೇಶಿ, ಸತೀಶ ಗಂಜಿ, ತಿಪ್ಪಣ್ಣ ರೆಡ್ಡಿ, ಶಕುಂತಲಾ M ಬಿರಾದಾರ, ಸುಜಾತ ರೆಡ್ಡಿ ಸೇರಿದಂತೆ ಇನ್ನಿತರ ಕಾರ್ಯಕರ್ತರು ಹಾಗೂ ರೈತರು ಭಾಗಿಯಾಗಿದ್ದರು.

ಕನ್ನಡ ಸಾಮ್ರಾಟ್ news digital desk

 

Share This

Facebook
X
WhatsApp
0 0 votes
Article Rating
Subscribe
Notify of
guest
0 Comments
Oldest
Newest Most Voted

ಇತ್ತೀಚಿನ ಸುದ್ದಿಗಳು