🚨 ಸೀರೆ ತಂದು ಕೊಡಲಿಲ್ಲ ಎಂಬ ಕಾರಣಕ್ಕೆ ಪತಿಯನ್ನು ಹತ್ಯೆ ಮಾಡಿದ ಪತ್ನಿ!
ಮಹಾರಾಷ್ಟ್ರ: ಸೀರೆ ತಂದು ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಪತ್ನಿಯೊಬ್ಬಳು ತನ್ನ ಪತಿಯನ್ನು ಹತ್ಯೆ ಮಾಡಿದ ಬೆಚ್ಚಿಬೀಳಿಸುವ ಘಟನೆ ಮಹಾರಾಷ್ಟ್ರದ ಬದ್ಲಾಪುರ ಪೂರ್ವದ ಶಿರ್ಗಾವ್ ಪ್ರದೇಶದಲ್ಲಿ ನಡೆದಿದೆ.
ಲಭ್ಯ ಮಾಹಿತಿಯ ಪ್ರಕಾರ, ಸೀರೆ ವಿಚಾರವಾಗಿ ದಂಪತಿಗಳ ನಡುವೆ ಆರಂಭವಾದ ಮಾತಿನ ಚಕಮಕಿ ತೀವ್ರ ಸ್ವರೂಪ ಪಡೆದು, ಪತ್ನಿ ಕೋಪದ ಭರದಲ್ಲಿ ಪತಿಯನ್ನು ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಆರೋಪಿ ಪತ್ನಿಯನ್ನು ಬಂಧಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಘಟನೆ ಸ್ಥಳೀಯರಲ್ಲಿ ತೀವ್ರ ಆತಂಕ ಮತ್ತು ಆಘಾತಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
– ಕನ್ನಡ ಸಾಮ್ರಾಟ್ ನ್ಯೂಸ್
#BadlapurCrime #MaharashtraNews #CrimeNews #KannadaSamratNews






