ಅಟಲ್ ಜೀ ಜನಸ್ನೇಹಿ ಕೇಂದ್ರ: ರಾಜ್ಯಕ್ಕೆ ಮಾದರಿಯಾದ ಕಲಬುರಗಿ ಜಿಲ್ಲೆ.
ಕಲಬುರಗಿ: ಅಟಲ್ ಜೀ ಜನಸ್ನೇಹಿ ಕೇಂದ್ರಗಳ ಮೂಲಕ ನಾಗರಿಕ ಸೇವಾ ಅರ್ಜಿಗಳನ್ನು ವಿಲೇವಾರಿ ಮಾಡುವಲ್ಲಿ ಕಲಬುರಗಿ ಜಿಲ್ಲೆಯು ಮತ್ತೊಮ್ಮೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ. 2025ರ ಡಿಸೆಂಬರ್ ತಿಂಗಳ ಅವಧಿಯಲ್ಲಿ ಜಿಲ್ಲೆಯು ಶೇ. 95.42 ರಷ್ಟು ಅರ್ಜಿಗಳನ್ನು ವಿಲೇವಾರಿ ಮಾಡುವ ಮೂಲಕ ಈ ಮೈಲಿಗಲ್ಲು ಸ್ಥಾಪಿಸಿದೆ. ಶುಕ್ರವಾರ ಬಿಡುಗಡೆಯಾದ ಅಧಿಕೃತ ಅಂಕಿಅಂಶಗಳ ಪ್ರಕಾರ, ಡಿಸೆಂಬರ್ ತಿಂಗಳಲ್ಲಿ ಸ್ವೀಕರಿಸಲಾದ ಒಟ್ಟು 39,964 ಅರ್ಜಿಗಳ ಪೈಕಿ 38,133 ಅರ್ಜಿಗಳನ್ನು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗಿದೆ….