“ತಾತನವರ ಆರೋಗ್ಯ ಸುಧಾರಿಸುತ್ತಿದೆ, ಯಾರೂ ಆತಂಕ ಪಡುವುದು ಬೇಡ”: ಸಂಸದ ಸಾಗರ್ ಖಂಡ್ರೆ ಸ್ಪಷ್ಟನೆ
“ತಾತನವರ ಆರೋಗ್ಯ ಸುಧಾರಿಸುತ್ತಿದೆ, ಯಾರೂ ಆತಂಕ ಪಡುವುದು ಬೇಡ”: ಸಂಸದ ಸಾಗರ್ ಖಂಡ್ರೆ ಸ್ಪಷ್ಟನೆ ಬೀದರ್/ಭಾಲ್ಕಿ : ಹಿರಿಯ ಮುಖಂಡರು ಹಾಗೂ ಮಾಜಿ ಸಚಿವರಾದ ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಮೊಮ್ಮಗ ಹಾಗೂ ಬೀದರ್ ಲೋಕಸಭಾ ಸದಸ್ಯ ಸಾಗರ್ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಡಾ.ಭೀಮಣ್ಣ ಖಂಡ್ರೆ ಅವರ ಆರೋಗ್ಯದ ಕುರಿತು ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿರುವ ಅವರು, ಈ ಕುರಿತು ಮಾಧ್ಯಮಗಳಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ. “ತಾತನವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಅವರು ವೈದ್ಯಕೀಯ…