ಶತಾಯುಷಿ, ಲೋಕನಾಯಕ ಭೀಮಣ್ಣ ಖಂಡ್ರೆ ಇನ್ನಿಲ್ಲ: ಭಾಲ್ಕಿಯಲ್ಲಿ ಶೋಕಸಾಗರ
ಶತಾಯುಷಿ, ಲೋಕನಾಯಕ ಭೀಮಣ್ಣ ಖಂಡ್ರೆ ಇನ್ನಿಲ್ಲ: ಭಾಲ್ಕಿಯಲ್ಲಿ ಶೋಕಸಾಗರ ಬೀದರ್/ಭಾಲ್ಕಿ: ಕಲ್ಯಾಣ ಕರ್ನಾಟಕದ ಹಿರಿಯ ಮುತ್ಸದ್ದಿ, ಅಖಿಲ ಭಾರತ ವೀರಶೈವ ಮಹಾಸಭೆಯ ಮಾಜಿ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಭೀಮಣ್ಣ ಖಂಡ್ರೆ (102) ಅವರು ಶುಕ್ರವಾರ ರಾತ್ರಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಭಾಲ್ಕಿಯ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ರಾಜಕೀಯ ಮತ್ತು ಸಾಮಾಜಿಕ ಸೇವೆ: ಶತಾಯುಷಿ ಭೀಮಣ್ಣ ಖಂಡ್ರೆ ಅವರು ಕೇವಲ ರಾಜಕಾರಣಿಯಲ್ಲದೆ, ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸಹಕಾರಿ ರಂಗದ ಧ್ರುವತಾರೆಯಾಗಿದ್ದರು. ಅವರ ಪ್ರಮುಖ ಸಾಧನೆಗಳು…