ವೀರಶೈವ ಲಿಂಗಾಯತರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಪಟ್ಟ ನೀಡಿ: ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಗೆ ಜ್ಯೋತಿ ಮರಗೋಳ ಒತ್ತಾಯ”
“ವೀರಶೈವ ಲಿಂಗಾಯತರಿಗೆ ಡಿಸಿಎಂ ಹಾಗೂ ಕೆಪಿಸಿಸಿ ಪಟ್ಟ ನೀಡಿ: ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಗೆ ಜ್ಯೋತಿ ಮರಗೋಳ ಒತ್ತಾಯ” ಕನ್ನಡ ಸಾಮ್ರಾಟ್ ವಿಶೇಷ ವರದಿ (ಕಲ್ಬುರ್ಗಿ): ರಾಜ್ಯದಲ್ಲಿ ನೂತನ ಸರ್ಕಾರ ರಚನೆಯ ಸಂಭ್ರಮದ ನಡುವೆ, ಕಲ್ಯಾಣ ಕರ್ನಾಟಕ ಭಾಗದ ವೀರಶೈವ ಲಿಂಗಾಯತ ನಾಯಕರಿಗೆ ಆಡಳಿತದಲ್ಲಿ ಪ್ರಮುಖ ಸ್ಥಾನಮಾನ ನೀಡಬೇಕೆಂಬ ಕೂಗು ಇದೀಗ ಪ್ರಬಲವಾಗಿದೆ. ನೂತನವಾಗಿ ಅಧಿಕಾರ ಸ್ವೀಕರಿಸುತ್ತಿರುವ ಸನ್ಮಾನ್ಯ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಕಲ್ಬುರ್ಗಿ ಜಿಲ್ಲಾಧ್ಯಕ್ಷರಾದ…