Home » ಕಲಬುರಗಿ » ಚಿಂಚೋಳಿ » ಚಿಂಚೋಳಿಯಲ್ಲಿ ಶಿಕ್ಷಣಕ್ಕೆ ಹೊಸ ಹೆಜ್ಜೆ: 1ರಿಂದ 12ನೇ ತರಗತಿವರೆಗೆ ನೂತನ ಶಾಲಾ ಕಟ್ಟಡ ನಿರ್ಮಾಣ RES World School

ಚಿಂಚೋಳಿಯಲ್ಲಿ ಶಿಕ್ಷಣಕ್ಕೆ ಹೊಸ ಹೆಜ್ಜೆ: 1ರಿಂದ 12ನೇ ತರಗತಿವರೆಗೆ ನೂತನ ಶಾಲಾ ಕಟ್ಟಡ ನಿರ್ಮಾಣ RES World School 

ಚಿಂಚೋಳಿಯಲ್ಲಿ ಶಿಕ್ಷಣಕ್ಕೆ ಹೊಸ ಹೆಜ್ಜೆ: 1ರಿಂದ 12ನೇ ತರಗತಿವರೆಗೆ ನೂತನ ಶಾಲಾ ಕಟ್ಟಡ ನಿರ್ಮಾಣ RES World School 

ಚಿಂಚೋಳಿ: ತಾಲೂಕಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಆಧುನಿಕ ಹಾಗೂ ಸುಸಜ್ಜಿತ ಕಲಿಕಾ ವಾತಾವರಣ ಒದಗಿಸುವ ಉದ್ದೇಶದಿಂದ ಆರ್.ಇ.ಎಸ್. ಸಂಸ್ಥೆ ಮಹತ್ವದ ಹೆಜ್ಜೆ ಇಟ್ಟಿದೆ. ಪಟ್ಟಣದ ಹೊರವಲಯದಲ್ಲಿರುವ ಆದರ್ಶ ಪ್ರೌಢಶಾಲೆಯ ಹಿಂಭಾಗದಲ್ಲಿ ನೂತನ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ಹೋಮ-ಹವನ ಕಾರ್ಯಕ್ರಮ ನೆರವೇರಿಸಲಾಯಿತು.

ಆರ್.ಇ.ಎಸ್. ಸಂಸ್ಥೆಯ ಅಧ್ಯಕ್ಷ ರವಿಕುಮಾರ ಮಾತನಾಡಿ, “ತಾಲೂಕಿನ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದೇ ನಮ್ಮ ಪ್ರಮುಖ ಗುರಿ. ಈಗಾಗಲೇ ಸಂಸ್ಥೆಯ ವತಿಯಿಂದ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ 6ನೇ ಇಂದ 12ನೇ ತರಗತಿವರೆಗೆ ಶಿಕ್ಷಣ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಲಾಗುವುದು” ಎಂದು ತಿಳಿಸಿದರು.

ನೂತನ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತಹ ಸುಸಜ್ಜಿತ ತರಗತಿ ಕೊಠಡಿಗಳು ಹಾಗೂ ಉತ್ತಮ ಕಲಿಕಾ ವಾತಾವರಣ ನಿರ್ಮಿಸಲಾಗುವುದು. ಅನುಭವಿ ಮತ್ತು ಅರ್ಹ ಶಿಕ್ಷಕ ವೃಂದದ ಮೂಲಕ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ, ಅವರ ಸಮಗ್ರ ಬೆಳವಣಿಗೆಗೆ ಪೂರಕವಾದ ಪರಿಸರ ರೂಪಿಸುವ ಉದ್ದೇಶ ಸಂಸ್ಥೆಯದ್ದಾಗಿದೆ ಎಂದು ಅವರು ಹೇಳಿದರು.

ಮುಂದಿನ ಹಂತದಲ್ಲಿ 6ನೆ ರಿಂದ 12ನೇ ತರಗತಿವರೆಗೆ ತರಗತಿಗಳನ್ನು ಆರಂಭಿಸುವ ಯೋಜನೆ ಇದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉನ್ನತ ಶಿಕ್ಷಣದ ಅವಕಾಶಗಳತ್ತ ದಾರಿ ಮಾಡಿಕೊಡುವ ಉದ್ದೇಶವೂ ಇದೆ. ಪದವಿ ಹಾಗೂ ತಾಂತ್ರಿಕ ಶಿಕ್ಷಣಕ್ಕೆ ಸಂಬಂಧಿಸಿದ ವಿವಿಧ ಕೋರ್ಸ್‌ಗಳನ್ನು ಸಂಸ್ಥೆಯ ವತಿಯಿಂದ ಆರಂಭಿಸುವ ಚಿಂತನೆಯೂ ಇದೆ ಎಂದು ಸಂಸ್ಥೆ ತಿಳಿಸಿದೆ.

ತಾಲೂಕಿನ ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ದೂರದ ಪ್ರದೇಶಗಳಿಗೆ ತೆರಳಬೇಕಾದ ಪರಿಸ್ಥಿತಿಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಯೋಜನೆ ಮಹತ್ವ ಪಡೆದಿದೆ. ಆಧುನಿಕ ಸೌಲಭ್ಯಗಳೊಂದಿಗೆ ಶಾಲಾ ಕಟ್ಟಡ ನಿರ್ಮಾಣಗೊಂಡರೆ ಸ್ಥಳೀಯ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಪಡೆಯಲು ಮತ್ತಷ್ಟು ಅವಕಾಶಗಳು ದೊರೆಯಲಿವೆ.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಮಂಡಳಿಯ ಸದಸ್ಯರಾದ ಗೌತಮ ಬೊಮ್ಮಳ್ಳಿ, ಶಿವರಾಜ್ ಪಾಟೀಲ, ನೀಲಕಂಠ ಸೀಳಿನ ಹಾಗೂ ಸುಷ್ಮಾ ರಾಜಶೇಖರ್ ಮುಸ್ತಾರಿ ಉಪಸ್ಥಿತರಿದ್ದರು. ಶಾಲೆಯ ಆಡಳಿತ ಸಿಬ್ಬಂದಿಯಾದ ಬಾಲಾಜಿ, ಸೈಯದ್ ಜಾಕೀರ್ ಮತ್ತು ರೇಣುಕಾ ರೆಡ್ಡಿ ಸಹ ಭಾಗವಹಿಸಿದ್ದರು.

ಅಲ್ಲದೆ, ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಾಜಿ ಪುರಸಭೆ ಅಧ್ಯಕ್ಷರಾದ ಶ್ರೀ ಆನಂದ ಟೈಗರ್, ಮಲ್ಲಿಕಾರ್ಜುನ, ಪಾಲಾಮುರ , ವೀರಶೆಟ್ಟ ವಕೀಲರು, ಸುಭಾಷ ಸೀಳಿನ, ಸುನಿಲ್, ರಾಜಶೇಖರ ಹಿತ್ತಲ, ಜಗದೀಶ್, ಸಿಂಗಠಾಕೂರ್, ರಾಜು ಪವಾರ್, ಗಂಗೂ ಮಕಾಸಿ, ಶಿವು ಜಾಬಶೆಟ್ಟಿ ಹಾಗೂ ಸುರೇಶ್ ದೇಶಪಾಂಡೆ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಕನ್ನಡ ಸಾಮ್ರಾಟ್ | KannadaSamrat.com

ಸ್ಥಳೀಯ ಸುದ್ದಿಯಿಂದ ಜಾಗತಿಕ ಸುದ್ದಿವರೆಗೆ — ನಿಮ್ಮ ಧ್ವನಿ, ನಮ್ಮ ಜವಾಬ್ದಾರಿ.

 

Share This

Facebook
X
WhatsApp
5 1 vote
Article Rating
Subscribe
Notify of
guest
0 Comments
Oldest
Newest Most Voted

ಇತ್ತೀಚಿನ ಸುದ್ದಿಗಳು